ಶಿವರಾತ್ರಿ ಹಬ್ಬದಂದು ಶಿವನನ್ನು ಹೇಗೆ ಪೂಜಿಸಿದರೆ ಶ್ರೇಷ್ಠ ಗೊತ್ತಿದೆಯಾ? ಇಲ್ಲಿದೆ ನೋಡಿ.. ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ..

ಶಿವರಾತ್ರಿ ಹಬ್ಬದಂದು ಶಿವನನ್ನು ಹೇಗೆ ಪೂಜಿಸಿದರೆ ಶ್ರೇಷ್ಠ ಗೊತ್ತಿದೆಯಾ? ಇಲ್ಲಿದೆ ನೋಡಿ.. ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ..

ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ..

ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ..

ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ… ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಎಲ್ಲರ ಕೋರಿಕೆ.. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.

ಶೇರ್ ಮಾಡಿ ನಮ್ಮ ಸಂಸ್ಕ್ರತಿ ನಮ್ಮ ಹೆಮ್ಮೆ..

Please follow and like us:
0
leave a comment

Leave a Reply

Your email address will not be published. Required fields are marked *

Devotional